ಉತ್ತರಕನ್ನಡ ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನದ ಸಮರ್ಪಣಾ ಸಮಾರಂಭ

posted in: Bhagavadgeeta Abhiyana | 0

ದಿನಾಂಕ 4/1/2025 ರಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಹಾಗೂ ಭಗವದ್ಗೀತಾ ಅಭಿಯಾನ ಸಮಿತಿ ಉತ್ತರಕನ್ನಡದ ವತಿಯಿಂದ ಶ್ರೀ ಗಜಾನನ – ಮಾರುತಿ ದೇವಸ್ಥಾನ ಹುಲ್ಲೋರಮನೆ ಯಲ್ಲಾಪುರದಲ್ಲಿ ನಡೆದ “ಉತ್ತರಕನ್ನಡ ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನದ ಸಮರ್ಪಣಾ ಸಮಾರಂಭದಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನವನ್ನು ನೀಡಿದರು.

ಶ್ರೀ ನೆಲಮಾವಿನ ಮಠದ ಪರಮಪೂಜ್ಯ ಶ್ರೀ ಶ್ರೀಮದ್ ಮಾಧವಾನಂದ ಭಾರತೀ ಮಹಾಸ್ವಾಮಿಗಳು ದಿವ್ಯ ಉಪಸ್ಥಿತಿಯಿತ್ತು ಅನುಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಸಿದ್ದಾಪುರ ಶಿರಳಗಿಯ ಶ್ರೀ ಬ್ರಹ್ಮಾನಂದ ಭಾರತೀ ಸ್ವಾಮಿಗಳು ಉಪಸ್ಥಿತರಿದ್ದು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು, ವಿದ್ಯಾರ್ಥಿಗಳು, ಮಾತೆಯರು ಊರನಾಗರೀಕರು ಭಾಗವಹಿಸಿದ್ದರು.