ವಿಜಯಪುರದ ಪಿ.ಡಿ.ಜೆ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಸ್ವರ್ಣವಲ್ಲೀ ಹಾಗೂ ಭಗವದ್ಗೀತಾ ಅಭಿಯಾನ ಸಮಿತಿ ವಿಜಯಪುರ ಸಹಯೋಗದಲ್ಲಿ, ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಇಂದು ವಿಜಯಪುರದ ಭಗವದ್ಗೀತಾ ಅಭಿಯಾನಕ್ಕೆ ಚಾಲನೆ ದೊರಕಿತು.
ಸರ್ವಜ್ಞ ವಿದ್ಯಾವಿಹಾರ ಪೀಠದ ಕುಲಪತಿ ಪಂ.ಮಧ್ವಾಚಾರ್ಯ ಮೊಕಾಶಿಯವರು ಉಪಸ್ಥಿತರಿದ್ದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಹಾಗೂ ಮಾಜಿ ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ರಮೇಶ ಜಿಗಜಿಣಗಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಅಭಿಯಾನದ ಕಾರ್ಯಾಧ್ಯಕ್ಷ ಉಮೇಶ ನವ, ಗೌರವಾಧ್ಯಕ್ಷ ಅರುಣ ಸೋಲಾಪೂರಕರ, ಶ್ರೀ ಹರಿ ಗೊಳಸಂಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ಶ್ರೀಹರ್ಷಗೌಡ ಪಾಟೀಲ, ಕಾಸುಗೌಡ ಬಿರಾದಾರ, ಉಮೇಶ ವಂದಾಲ, ಅಶೋಕ ಅಲ್ಲಾಪೂರ, ವಿಜಯ ಜೋಶಿ, ವಿಕಾಸ ಪದಕಿ…..ಮೊದಲಾದವರು ಉಪಸ್ಥಿತರಿದ್ದರು