ಹಿಂದುತ್ವದ ಭಾವ ಬುನಾದಿ ‘ಯುಗಾದಿ’: ಸ್ವರ್ಣವಲ್ಲೀ ಶ್ರೀ

posted in: Press Note/News | 0

ಹಿಂದುತ್ವದ ಭಾವ ಬುನಾದಿಯಾದ ಯುಗಾದಿ ಹಬ್ಬ ಎಲ್ಲರನ್ನೂ ಒಂದೆಡೆ ಸೇರಿಸುವ ಹಬ್ಬವಾಗಿದೆ ಎಂದು ಸೋಂದಾ ಸ್ವರ್ಣವಲ್ಲೀ‌ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ನುಡಿದರು.

ನಗರದ ವಿಕಾಸಾಶ್ರಮ ಬಯಲಿನಲ್ಲಿ ಆಯೋಜಿಸಲಾಗಿದ್ದ 27ನೇ ಯುಗಾದಿ ಉತ್ಸವ ಸಮಾರಂಭದಲ್ಲಿ ದಿವ್ಯಸಾನಿಧ್ಯವಹಿಸಿ ಆಶೀರ್ವದಿಸಿದರು. ಮನುಕುಲದ ಪಾಪ ತೊಳೆಯುವ ಪಾಪವಿನಾಶಿನಿ ಗಂಗಾ ಮಾತೆ ಪ್ರತಿಯೊಬ್ಬರ ಪ್ರಾತಃಸ್ಮರಣೆಯಾಗಿರಬೇಕು. ಗಂಗೆಯನ್ನು ನೆನಯುವ ಮೂಲಕ ದಿನವನ್ನು ಪ್ರಾರಂಭಿಸಬೇಕು. ಸೂರ್ಯನಮಸ್ಕಾರ, ಭಗವದ್ಗೀತಾ ಪಠಣ, ಸಾಯಂಕಾಲ ಭಜನೆ ಇಂತಹ ಒಳ್ಳೆ ಅಭ್ಯಾಸಗಳಿಂದ ಜೀವನದಲ್ಲಿ ಅತ್ಯುತ್ತಮ ಪರಿವರ್ತನೆ ಹೊಂದಲು ಸಹಾಯಕವಾಗಿದೆ. ದೇವರಲ್ಲಿ ಭಕ್ತಿ ಬೆಳೆಸಿಕೊಂಡಷ್ಟು ಪರಿಪೂರ್ಣವಾಗಲು ಸಾಧ್ಯ ಎಂದರು.

ಸೊಂದಾ ಜೈನ ಮಠದ ಶ್ರೀ ಭಟ್ಟಾಕಳಂಕ ಭಟ್ಟಾರಕ ಸ್ವಾಮೀಜಿ,
ನಗರದ ಬಣ್ಣದಮಠದ ಮ.ನಿ.ಪ್ರ. ಶಿವಲಿಂಗ ಮಹಾಸ್ವಾಮಿಗಳು ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಯುಗಾದಿ ಸಮಿತಿಯ ಅಧ್ಯಕ್ಷ ರಮೇಶ್ ದುಬಾಶಿ, ಯುಗಾದಿ ಸಮಿತಿ ಉಪಾಧ್ಯಕ್ಷ ಅಶ್ವಿನ್ ನಾಯ್ಕ್, ಪ್ರಮುಖರಾದ ಶ್ರೀನಿವಾಸ ಹೆಬ್ಬಾರ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಭೀಮಣ್ಣ ನಾಯ್ಕ್, ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು. ಸಾರ್ವಜನಿಕರು ಅತ್ಯುತ್ಸಾಹದಿಂದ ಭಾಗವಹಿಸಿ ಯುಗಾದಿ ಉತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ಸಭಾ ಕಾರ್ಯಕ್ರಮದ ನಂತರ ಬೃಹತ್ ಶೋಭಾಯಾತ್ರೆಗೆ ಚಾಲನೆ ನೀಡಲಾಗಿದ್ದು, 50ಕ್ಕೂ ಹೆಚ್ಚಿನ ವಿವಿಧ ವಿನ್ಯಾಸದ ಬಂಡಿಗಳು ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿದವು.