
ಹೊಸಪೇಟೆಯ ಸಂಡೂರು ರಸ್ತೆಯಲ್ಲಿರುವ ನಿವೇದಿತಾ ಶಾಲೆಯ ಆವರಣದಲ್ಲಿ ‘ಶ್ರೀ ಭಗವದ್ಗೀತಾ ಅಭಿಯಾನ – ಕರ್ನಾಟಕ’ದ ಅಡಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಶಾಲೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿದ್ಯಾರ್ಥಿಗಳಿಗೆ ಭಗವದ್ಗೀತೆಯಿಂದ ಆಗುವ ಪ್ರಯೋಜನಗಳ ಬಗ್ಗೆ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಸಂಸ್ಥೆಯ ಪದಾಧಿಕಾರಿಗಳು, ಶಾಲೆಯ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
