ರಾಜ್ಯಮಟ್ಟದ ಮಹಾಸಮರ್ಪಣೆ

ಶಿವಮೊಗ್ಗದಲ್ಲಿ ನಡೆದ ಶ್ರೀ ಭಗವದ್ಗೀತಾ ಅಭಿಯಾನ 2025; ರಾಜ್ಯಮಟ್ಟದ ಮಹಾಸಮರ್ಪಣೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು, ಹರಿಹರಪುರದ ಶ್ರೀ ಆದಿಶಂಕರಾಚಾರ್ಯ ಶ್ರೀ ಶಾರದಾ ಲಕ್ಷ್ಮೀನೃಸಿಂಹ ಪೀಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳು, ಬೆಕ್ಕಿನಕಲ್ಮಠದ ಡಾ. ಶ್ರೀ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದ ಪರಮಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಹಿರಿಯರು, ಕೇರಳದ ರಾಜ್ಯಪಾಲರು ಶ್ರೀ ವಿಶ್ವನಾಥ ಅರ್ಲೇಕರ್, ಕೇಂದ್ರ ಸಚಿವರು ಹೆಚ್. ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ
ಅವರು, ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ ಕೆ.ಎಸ್ ಈಶ್ವರಪ್ಪ ಅವರು, ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ ಅವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್ ಸೇರಿದಂತೆ ಅನೇಕ ಗಣ್ಯರು, ತಾಯಂದಿರು, ಶಾಲಾ ಮಕ್ಕಳು ಈ ಅಪರೂಪದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಭಗವದ್ಗೀತಾ#ವಿಶ್ವಮಾತಾ