ನ.3ಕ್ಕೆ ದಾವಣಗೆರೆಯಲ್ಲಿ ಶ್ರೀ ಭಗವದ್ಗೀತಾ ಅಭಿಯಾನದ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ. ಭಗವದ್ಗೀತೆ ಅಭಿಯಾನ ಕಳೆದ 15 ವರ್ಷದಿಂದ ನಡೆಸುತ್ತಾ ಬರಲಾಗಿದ್ದು, ವ್ಯಕ್ತಿತ್ವ ವಿಕಸನ, ಸಾಮಾಜಿಕ ಸಾಮರಸ್ಯ, ರಾಷ್ಟ್ರೀಯ ಭಾವೈಕ್ಯತೆ ದೃಷ್ಟಿಯಿಂದ ಅಭಿಯಾನ ಈ ಪ್ರಾರಂಭವಾಯಿತು. ರಾಜ್ಯದಲ್ಲಿ ಏಕಕಾಲದಲ್ಲಿ ಅಭಿಯಾನ ನಡೆಯುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ನ.3ರಂದು ಮಧ್ಯಾಹ್ನ 3ಕ್ಕೆ ನಗರದ ಮಾಗನೂರು ಬಸಪ್ಪ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ಶ್ರೀ ಭಗವದ್ಗೀತಾ ಅಭಿಯಾನದ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ತಿಳಿಸಿದರು.